ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗ ಕಾಸರಗೋಡು ಜಿಲ್ಲಾಧ್ಯಕ್ಷರಾಗಿ ಹಮೀದ್ ಕೋಡಿಯಡ್ಕ ಆಯ್ಕೆ
Update: 2016-01-13 14:27 IST
ಮಂಜೇಶ್ವರ : ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಕಾಸರಗೋಡು ಜಿಲ್ಲಾಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಹಮೀದ್ ಕೋಡಿಯಡ್ಕ ಇವರನ್ನು ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಸಮಿತಿ ಆಯ್ಕೆ ಮಾಡಿದೆ.
ಇವರು ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಸಮಿತಿ ರಾಜ್ಯ ಸಮಿತಿ ಸದಸ್ಯರಾಗಿ, ಸಾರ್ವಜನಿಕ ಹಕ್ಕು ಸಂರಕ್ಷಣಾ ಸಮಿತಿ ಜಿಲ್ಲಾ ಉಪಾಧ್ಯಕ್ಷರಾಗಿ , ಮಂಜೆಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ , ಅಟ್ಟೆಗೋಳಿ ಲೈಬ್ರರಿ ಕೌನ್ಸಿಲ್ ನ ಅಧ್ಯಕ್ಷರಾಗಿ ಅಟ್ಟೆಗೋಳಿ ಜುಮಾ ಮಸೀದಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.