×
Ad

ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಸಭೆ ಮುಂದೂಡಿಕೆ; ನಾಳೆ ಅಂತಿಮ ನಿರ್ಧಾರ

Update: 2016-01-13 23:39 IST

ಹೊಸದಿಲ್ಲಿ, ಜ.13: ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ದ್ವಿಪಕ್ಷೀಯ ಸಭೆಯನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 15ರಂದು ಈ ಸಭೆ ನಿಗದಿಯಾಗಿತ್ತು. ಸಭೆಯಲ್ಲಿ ಭಾಗವಹಿಸುವ ವಿಚಾರಕ್ಕೆ ಸಂಬಂಧಿಸಿ ಪ್ರಧಾನ ಮಂತ್ರಿ ನರೆಂದ್ರ ಮೋದಿ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿಈ ಬಗ್ಗೆ ಗುರುವಾರ ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ವಿದೇಶಾಂಗ ಸಚಿವೆ ಜೈಶಂಕರ್ ಭಾಗವಹಿಸಿದ್ದರು.
  ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಭಾರತ ಮತ್ತು ಅಮೆರಿಕದ ಒತ್ತಡಕ್ಕೆ ಮಣಿದು ಪಾಕ್ ಸರಕಾರ ಉಗ್ರರ ನೆಲೆಗಳ ಮೇಲೆ ದಾಳಿ ಆರಂಭಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News