×
Ad

ಡಾ.ವಿಶಾಲಕ್ಷಿಗೆ ‘ಯುವ ವಿಜ್ಞಾನಿ ಪ್ರಶಸ್ತಿ’ ಪ್ರದಾನ

Update: 2016-01-13 23:46 IST


ಮಂಗಳೂರು, ಜ.13: ಮಂಗಳೂರು ವಿವಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿಶಾಲಕ್ಷಿ ಬಿ.ಯವರಿಗೆ ‘ಡಾ.ಕಲ್ಪನಾ ಚಾವ್ಲಾ ಯುವ ವಿಜ್ಞಾನಿ-2013 ಮಹಿಳಾ ಪ್ರಶಸ್ತಿ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್‌ಸೈನ್ಸ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಿತರಿಸಿದರು.
ಈ ಸಂದರ್ಭ ವಿಜ್ಞಾನಿ ಸಿ.ಎನ್.ಆರ್.ರಾವ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ನಿರ್ದೇಶಕ ಅನುರಾಗ್ ಕುಮಾರ್, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯದರ್ಶಿ ಪ್ರೊ.ಎಸ್.ಸುಬ್ರಹ್ಮಣ್ಯನ್, ಸರಕಾರದ ಐ.ಟಿ., ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ವಿ. ಮಂಜುಳಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News