ಬಂಟ್ವಾಳ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
Update: 2016-01-14 12:17 IST
ಬಂಟ್ವಾಳ ತಾಲೂಕು ಕಚೇರಿಗೆ ಪೂರ್ವ ನಿಗದಿಯಂತೆ ಗುರುವಾರ ಬೆಳಗ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಸಾರ್ವಜನಿಕರು ಸಲ್ಲಿಸಿದ ಮನವಿ ಮತ್ತು ಅರ್ಜಿಗಳು ನಿಗದಿತ ಅವಧಿಯೊಳಗೆ ವಿಲೆಗೊಳಿಸುವ ಸಂಬಂಧ ಸಾಧಿಸಲಾದ ಪ್ರಗತಿಯನ್ನು ಪರಿಶೀಲಿಸಿದರು. ಅಲ್ಲದೆ ಈ ಸಂದರ್ಭ ಸಾರ್ವಜನಿಕರ ಕುಂದುಕೊರತೆಯನ್ನು ಸ್ವೀಕರಿಸಿದರು.