ಸುಳ್ಯ: ಲೈಂಗಿಕ ಕಿರುಕುಳ - ಎರಡು ಪೋಕ್ಸೋ ಪ್ರಕರಣ ದಾಖಲು
Update: 2016-01-14 17:44 IST
ಸುಳ್ಯ: ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ.
ಜಾಲ್ಸೂರು ಗ್ರಾಮದ ಯುವಕನೊಬ್ಬ ತನ್ನ ಅತ್ತೆಯ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.
ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ಜಟ್ಟಿಪಳ್ಳ ನಿವಾಸಿ ಅಬ್ದುಲ್ಲ ಎಂಬವರ ಪುತ್ರ ಶಿಯಾಬ್(40) ಎಂಬಾತನ ಮೇಲೆ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಕಾಲೇಜು ಬಿಟ್ಟು ಸಂಜೆ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಯ ಮೇಲೆ 10 ದಿನಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದಾಗಿ ತಡವಾಗಿ ದೂರು ನೀಡಲಾಗಿದೆ.