ಮೂಡುಬಿದಿರೆ: ಜ. 17 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಶಿಬಿರ
Update: 2016-01-14 21:15 IST
ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ಮತ್ತು ಆಳ್ವಾಸ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು ಮಿಜಾರು ಇದರ ಸಂಯುಕ್ತ ಆಶ್ರಯದಲ್ಲಿ ಜ. 17 ರಂದು ಪೂವಾಹ್ನ 9 ಗಂಟೆಗೆ ವಾಣಿ ವಿಲಾಸ ಹಿ.ಪ್ರಾ.ಶಾಲೆ ಅಶ್ವತ್ಥಪುರ ಇಲ್ಲಿ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಶಿಬಿರ ನಡೆಯಲಿದೆ.
ಕಾಲೇಜಿನ ಪ್ರಾಂಶುಪಾಲರು ಹಾಗೂ ಪಂಚಾಯತಿಯ ಅಧ್ಯಕ್ಷರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ತೆಂಕಮಿಜಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.