ಬಂಟ್ವಾಳ: ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ
ವಿಟ್ಲ, ಜ.14: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ಬಿ.ಸಿ.ರೋಡ್‌ನ ಸ್ತ್ರೀ ಶಕ್ತಿ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಕ್ಕುಪತ್ರ, ಚೆಕ್ ವಿತರಿಸಿದರು
ಬಳಿಕ ಮಾತನಾಡಿದ ಅವರು, ರಾಜ್ಯ ದಲ್ಲೇ ಪ್ರಪ್ರಥಮ ಬಾರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 94ಸಿ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಅಲ್ಲದೆ, ರಾಜ್ಯದಲ್ಲಿ ಅತೀ ಹೆಚ್ಚು ಅಂಗನವಾಡಿ ಕೇಂದ್ರಗಳು ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದ ಹೆಗ್ಗಳಿಕೆಗೂ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಪಾತ್ರವಾಗಿದೆ ಎಂದರು. 94ಸಿ ಅಡಿಯಲ್ಲಿ 400 ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ, 200 ಮಂದಿಗೆ ಅಕ್ರಮ-ಸಕ್ರಮ ಸಾಗುವಳಿ ಪತ್ರ, 200 ಮಂದಿಗೆ ಅಡಿಕೆ ಕೊಳೆರೋಗದ ಪರಿಹಾರಧನ ಚೆಕ್ ವಿತರಿಸಲಾಯಿತು ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ತಾಪಂ ಸದಸ್ಯರಾದ ಸಂಪತ್ ಕುಮಾರ್ ಶೆಟ್ಟಿ, ಫ್ಲೋಸಿ ಡಿಸೋಜ, ಬುಡಾ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಪಕ್ಷದ ಮುಖಂಡರಾದ ಬಿ.ಎಚ್. ಖಾದರ್ ಬಂಟ್ವಾಳ, ಬಿ.ಎಂ. ಅಬ್ಬಾಸ್ ಅಲಿ, ಮಾಯಿಲಪ್ಪಸಾಲ್ಯಾನ್, ಪದ್ಮನಾಭ ರೈ, ಯೂಸುಫ್ ಕರಂದಾಡಿ, ಮುಹಮ್ಮದ್ ನಂದಾವರ ಉಪಸ್ಥಿತರಿದ್ದರು. ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ಉಪತಹಶೀಲ್ದಾರ್ ನಾರಾಯಣ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.