×
Ad

ಜ.24ರಂದು ಉಪ್ಪಾರ ಸಂಘದಿಂದ ಸನ್ಮಾನ

Update: 2016-01-14 23:44 IST

 ಬೆಂಗಳೂರು, ಜ.14: ರಾಜ್ಯ ಉಪ್ಪಾರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಜ. 24 ರಂದು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರು ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉಪ್ಪಾರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಈಶ್ವರಯ್ಯ ಹಾಗೂ ಮಹಿಳಾ ಅಧ್ಯಕ್ಷರಾಗಿ ಹನುಮಾಕ್ಷಿ ಗೋಗಿ ಆಯ್ಕೆಯಾಗಿದ್ದಾರೆ. ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಕ್ಲಬ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಆನಂದ್‌ರಾವ್ ಸರ್ಕಲ್ ಹತ್ತಿರವಿರುವ ವಿಶ್ವೇಶ್ವರಯ್ಯ ಆಡಿಟೋರಿಯಮ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಉದ್ಘಾಟನೆ ಮಾಡಲಿದ್ದಾರೆ. ಉಪಸಭಾಧ್ಯಕ್ಷ ಶಿವಶಂಕರರೆಡ್ಡಿ, ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ, ಪುಟ್ಟರಂಗಶೆಟ್ಟಿ, ಮಹಾಲಕ್ಷ್ಮೀ ಬಡಾವಣೆಯ ಶಾಸಕ ಗೋಪಾಲಯ್ಯ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News