ಜ.17ರಂದು ಅಂಗವಿಕಲರ ಅಧ್ಯಯನಕ್ಕಾಗಿ ನಿಧಿ ಸಂಗ್ರಹ
ಬೆಂಗಳೂರು, ಜ. 14: ಕರ್ನಾಟಕ ಅಂಧರ ಕ್ಷೇಮಾಭ್ಯುದಯ ಸಂಸ್ಥೆಯ ವತಿಯಿಂದ ಅಂಗವಿಕಲರಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸಲು ಹಾಸ್ಯೋತ್ಸವ ಕಾರ್ಯಕ್ರಮದ ಮೂಲಕ ಜ.17 ರಂದು ನಿಧಿ ಸಂಗ್ರಹಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಪರಶಿವಮೂರ್ತಿ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗವಿಕಲರಿಗೆ ಶಿಕ್ಷಣ, ಸ್ವಸಾಮರ್ಥ್ಯ ಬಲವರ್ಧನೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ, ನಗರದ ಸಿಲ್ವರ್ ಜುಬಿಲಿ ಪಾರ್ಕ್, ಆನಂದರಾವ್ ವೃತ್ತ , ಕೆಇಬಿ ಎಂಜಿನಿಯರ್ ಅಸೋಸಿಯೇಷನ್ ಹತ್ತಿರದ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಹಾಸ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಹೆಸರಾಂತ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಹಾಸ್ಯೋತ್ಸವವನ್ನು ನಡೆಸಿಕೊಡಲಿದ್ದಾರೆ. ಪ್ರವೇಶ ದರ ಟಿಕೆಟ್ 250 ರಿಂದ 1500 ರವರೆಗೂ ಇದೆ. ಅಂಗವಿಕಲರ ಅಭಿವೃದ್ಧಿಗಾಗಿ ನಡೆಯುತ್ತಿರುವಂತಹ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ನೀಡಬೇಕೆಂದು ಈ ಮೂಲಕ ಮನವಿ ಮಾಡಿದ್ದಾರೆ.