×
Ad

ಶಿಕ್ಷಣ ಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲಿ: ಶಾಸಕ ಲೋಬೊ

Update: 2016-01-14 23:57 IST

ಯೆನೆಪೊಯ ವಿವಿ: ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಪ್ರದಾನ

ಉಳ್ಳಾಲ, ಜ.14: ಪ್ರಸ್ತುತ ಸಮಾಜದ ಎಲ್ಲಾ ಕ್ಷೇತ್ರ ಗಳಲ್ಲಿ ಪೈಪೋಟಿಯಿದ್ದು, ವಿದ್ಯಾರ್ಥಿಗಳು ಹೊರಗಿನ ಸಮಾಜವನ್ನು ಎದುರಿಸಲು ಸಜ್ಜಾಗಬೇಕು. ಶಿಕ್ಷಣ ಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ನೀಡಬೇಕಿದೆ. ಈ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ಒದಗಿಸುತ್ತಿರುವ ಯೆನೆಪೊಯ ವಿಶ್ವವಿದ್ಯಾನಿಲಯದ ಕಾರ್ಯವೈಖರಿ ಶ್ಲಾಘ ನೀಯ ಎಂದು ಶಾಸಕ ಜೆ.ಆರ್.ಲೋಬೊ ಅಭಿಪ್ರಾಯಪಟ್ಟರು.

ಅವರು ಯೆನೆಪೊಯ ಮೊಯ್ದಿನ್ ಕುಂಞಿ ಮೆಮೋರಿಯಲ್ ಎಜುಕೇಷನಲ್ ಮತ್ತು ಚಾರಿಟೇ ಬಲ್ ಟ್ರಸ್ಟ್‌ನ ಘಟಕ ಸಂಸ್ಥೆ ಯೆನೆಪೊಯ ಫೌಂಡೇಶನ್ ಹಾಗೂ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಗುರುವಾರ ಯೆನೆಪೊಯ ವಿವಿಯ ಯೆಂಡ್ಯೂರೆನ್ಸ್ ಝೋನ್ ಸಭಾಂಗಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆಶೈಕ್ಷಣಿಕ ಪ್ರತಿಭಾ ಪುರಸ್ಕಾರ ಪ್ರದಾನಿಸಿ ಮಾತನಾ ಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಸೆಸೆಲ್ಸಿ, ಪಿಯುಸಿ, ಸ್ನಾತಕೋತ್ತರ ಪದವಿ ಮಟ್ಟದಲ್ಲಿ ಅತ್ಯುನ್ನತ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಶೇ.100 ಫಲಿತಾಂಶ ದಾಖಲಿಸಿದ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮಾತನಾಡಿ, ಇಂದಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಕ್ಷುಲ್ಲಕ ಕಾರಣಗಳಿಂದ ಅಶಾಂತಿ ಉಂಟಾಗುತ್ತಿವೆ. ವಿದ್ಯಾರ್ಥಿಗಳು ಜಾತಿ-ಧರ್ಮ ಬದಿಗಿಟ್ಟು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂದರು.

ಯೆನೆಪೊಯ ವಿವಿ ಕುಲಪತಿ ವೈ.ಅಬ್ದುಲ್ಲಾ ಕುಂಞಿ, ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ಕೆ.ಖಾಲಿದ್ ಬಾವ, ಡಾ.ಸಿ.ಪಿ.ಹಬೀಬ್ ರಹ್ಮಾನ್, ಅಕಾಡಮಿ ನಿರ್ದೇಶಕ ಪ್ರೊ.ಪಿ.ಸಿ.ಎಂ. ಕುಂಞಿ, ಕಾರ್ಯದರ್ಶಿ ಡಾ.ಅಖ್ತರ್ ಹುಸೈನ್ ಉಪಸ್ಥಿತರಿದ್ದರು. ಉಪಕುಲಪತಿ ಡಾ.ಎಂ.ವಿಜಯಕುಮಾರ್ ಸ್ವಾಗ ತಿಸಿದರು. ಡಾ.ಮಲ್ಲಿಕಾ ಶೆಟ್ಟಿ ಮತ್ತು ಡಾ. ರೋಶೆಲ್ ಟೆಲ್ಲೀಸ್ ಕಾರ್ಯಕ್ರಮ ನಿರೂಪಿಸಿದರು.

 ಯೆನೆಪೊಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವೈ.ಮುಹಮ್ಮದ್ ಕುಂಞಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಟ್ರಸ್ಟ್ ವತಿಯಿಂದ ಈ ವರ್ಷ ದ.ಕ., ಉಡುಪಿ ಹಾಗೂ ಕಾಸರಗೋಡಿನ 300 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೂರು ಸಾವಿರದಿಂದ 10 ಸಾವಿರ ರೂ.ವರೆಗೆ ಪುರಸ್ಕಾರ ನೀಡಲಾಗುತ್ತಿದೆ. ಇದಕ್ಕೆ 11 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಪ್ರತೀ ವರ್ಷ ಮೀಸಲಾತಿ ಮತ್ತು ಕ್ರೀಡಾ ಆಧಾರದಲ್ಲಿ ಐದು ವೈದ್ಯಕೀಯ, ಐದು ಫಿಸಿಯೋಥೆರಪಿ, ಐದು ದಂತ ವೈದ್ಯಕೀಯ ಹಾಗೂ ಐದು ನರ್ಸಿಂಗ್ ಸೀಟುಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಇದಕ್ಕಾಗಿ 4.18 ಕೋಟಿ ರೂ. ವ್ಯಯಿಸುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News