×
Ad

ಮಂಗಳೂರು ವಿ.ವಿ ಸಾಫ್ಟ್‌ಬಾಲ್ ಪಂದ್ಯಾಟ ಸೈಂಟ್ ಅಲೋಶಿಸ್,ಆಳ್ವಾಸ್‌ಗೆ ಪ್ರಶಸ್ತಿ

Update: 2016-01-15 19:03 IST

ಮೂಡುಬಿದರೆ: ಶ್ರೀ ಮಹಾವೀರ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ ಮಟ್ಟದ ಸಾಫ್ಟ್‌ಬಾಲ್ ಪಂದ್ಯಾಟದ ಪುರುಷರ ವಿಭಾಗದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ಹಾಗೂ ಮಹಿಳೆಯರ ವಿಭಾಗದಲ್ಲಿ ಮೂಡುಬಿದರೆ ಆಳ್ವಾಸ್ ಕಾಲೇಜು ಪ್ರಥಮ ಸ್ಥಾನ ಪಡೆದಿದೆ.

ಗ್ರೇಸಿ ಮಚಾಡೋ ರೋಲಿಂಗ್ ಟೋಫಿ ಪಡೆದ ಆಳ್ವಾಸ್

                

 

ಪುರಷರ ವಿಭಾಗದಲ್ಲಿ ಆಳ್ವಾಸ್ ಹಾಗೂ ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ದ್ವಿತೀಯ ಸ್ಥಾನಿಯಾಗಿದೆ. ಅತಿಥೇಯ ಶ್ರೀ ಮಹಾವೀರ ಕಾಲೇಜು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ ಗ್ರೇಸಿ ಮಚಾಡೋ ರೋಲಿಂಗ್ ಟೋಫಿ ತನ್ನದಾಗಿಸಿಕೊಂಡಿದೆ.

ಮಹಾವೀರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಚಂದ್ರಶೇಖರ ದೀಕ್ಷಿತ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ರಮೇಶ್ ಭಟ್, ಎಂ. ಕೆ. ಅನಂತ್‌ರಾಜ್ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಹಾಗೂ ಮಂಗಳೂರು ವಿ.ವಿ. ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೇಣುಗೋಪಾಲ ನೋಂಡಾ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜ್ ಪ್ರಸಾದ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News