ಪರ್ಯಾಯ: ಆರೋಗ್ಯ, ನೈಮರ್ಲ್ಯದ ಬಗ್ಗೆ ಹೆಚ್ಚಿನ ಕಾಳಜಿ; ಸಚಿವ ಖಾದರ್

Update: 2016-01-15 19:04 GMT

ಉಡುಪಿ, ಜ.15: ಈ ಬಾರಿಯ ಪರ್ಯಾಯ ಮಹೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯ ಭಕ್ತರು ಭಾಗವಹಿಸುವುದರಿಂದ ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಬಗ್ಗೆ ಆರೋಗ್ಯ ಇಲಾಖೆ ಎಲ್ಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

 ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ಪರ್ಯಾಯಕ್ಕೆ ಸಂಬಂಸಿ ಕರೆಯಲಾದ ಅಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಪರ್ಯಾಯದಲ್ಲಿ ಹೆಚ್ಚಿನ ಜನಸಂದಣಿ ಇರುವುದರಿಂದ ಇಲಾಖೆಯ ಅಗತ್ಯ ಕ್ರಮಗಳ ಬಗ್ಗೆ ಗಂಭೀರವಾಗಿ ತೆಗೆದುಕೊಂಡು, ಎಲ್ಲ ವ್ಯವಸ್ಥೆಗಳು ಜನರಿಗೆ ಸರಿಯಾಗಿ ತಲುಪುವಂತೆ ಅಕಾರಿಗಳು ನಿಗಾವಹಿಸಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಶಾಸಕ ಪ್ರಮೋದ್ ಮಧ್ವರಾಜ್, ನಗರಸಭೆ ಅಧ್ಯಕ್ಷ ಪಿ.ಯುವರಾಜ್, ಅಪರ ಜಿಲ್ಲಾಕಾರಿ ಚೆನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ರೋಹಿಣಿ, ಪೌರಾಯುಕ್ತ ಡಿ.ಮಂಜುನಾಥಯ್ಯ, ಜಿಲ್ಲಾ ಸರ್ಜನ್ ಮಹೇಂದ್ರ, ಪರ್ಯಾಯ ಸಮಿತಿಯ ವಾಸುದೇವ ಭಟ್, ಆರೋಗ್ಯ ಇಲಾಖೆಯ ಅಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News