ಕೆರೆಗೆ ಹಾರಿ ಯುವಕ ಆತ್ಮಹತ್ಯೆ
Update: 2016-01-16 22:58 IST
ಪುತ್ತೂರು, ಜ.16: ಅವಿವಾಹಿತ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದ್ದು, ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಆಶ್ರಯ ಕಾಲನಿ ನಿವಾಸಿ ರವಿ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಈ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ರವಿ ಶುಕ್ರವಾರ ಬೆಳಗ್ಗಿನಿಂದಲೇ ನಾಪತ್ತೆಯಾಗಿದ್ದು, ಮನೆ ಮಂದಿ ಹುಡುಕಾಟ ನಡೆಸುತ್ತಿದ್ದರು. ಶನಿವಾರ ಬೆಳಗ್ಗೆ ಮನೆಯ ಸಮೀಪದ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.
ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.