ಟೆಸ್ಟ್ ರ್ಯಾಂಕಿಂಗ್: ಭಾರತ ನಂ.1
Update: 2016-01-16 23:51 IST
ದುಬೈ, ಜ.16: ಜೋಹಾನ್ಸ್‌ಬರ್ಗ್‌ನಲ್ಲಿ ದಕ್ಷಿಣ ಆಫ್ರಿಕ ತಂಡ ಇಂಗ್ಲೆಂಡ್ ವಿರುದ್ಧದ ಮೂರನೆ ಟೆಸ್ಟ್ ಪಂದ್ಯವನ್ನು ಸೋತಿರುವ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟಿದೆ.
ಪ್ರಸ್ತುತ ಆಸ್ಟ್ರೇಲಿಯ ಪ್ರವಾಸದಲ್ಲಿರುವ ಭಾರತ ತಂಡ ಏಕದಿನ ಸರಣಿಯನ್ನು ಆಡುತ್ತಿದೆ. ಕಳೆದ ತಿಂಗಳು ಸ್ವದೇಶದಲ್ಲಿನಡೆದಿದ್ದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಇದೀಗ 110 ರೇಟಿಂಗ್ ಪಾಯಿಂಟ್‌ನೊಂದಿಗೆ ಅಗ್ರ ಸ್ಥಾನಕ್ಕೇರಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 0-2 ರಿಂದ ಹಿನ್ನಡೆ ಅನುಭವಿಸಿರುವ ದಕ್ಷಿಣ ಆಫ್ರಿಕ ತಂಡ ನಂ.1 ಸ್ಥಾನ ಕಳೆದುಕೊಂಡಿದೆ.