×
Ad

ಜ.25ರಂದು ‘ಮತದಾರರ ದಿನ’ ಆಚರಣೆ

Update: 2016-01-17 00:09 IST

ಬೆಂಗಳೂರು, ಜ. 16: ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ವರ್ಷದಂತೆ ಈ ವರ್ಷವೂ ಜ.25ರಂದು ಮತದಾರರ ದಿನವನ್ನು ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ತಿಳಿಸಿದ್ದಾರೆ.

ಶನಿವಾರ ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನಿರ್ವಚನಾ ಸದನ್‌ನಲ್ಲಿ ಮತದಾರರ ದಿನ ಆಚರಣೆ ಕುರಿತಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅದೇ ದಿನ ಎಲ್ಲ ಜಿಲ್ಲೆಗಳಲ್ಲೂ ಚುನಾವಣಾಧಿಕಾರಿಗಳೂ ಆದಂತಹ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮತದಾರರ ದಿನ ಆಚರಿಸಲಾಗುವುದು. ಅಂದು ಮತದಾನದ ಮಹತ್ವ, ಮತದಾರರ ಜಾಗೃತಿ ಕುರಿತಂತೆ ಸಮಾರಂಭದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು, ಜ.25ರಂದು ನಗರದ ಪುರಭವನದಲ್ಲಿ ನಡೆಯುವ ಮುಖ್ಯ ಸಮಾರಂಭದಲ್ಲಿ ರಾಜ್ಯಪಾಲರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾರಂಭದಲ್ಲಿ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ನೀಡಲಾಗುವುದು ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News