ಫೆಲೊಶಿಪ್‌ಗೆ ಅರ್ಜಿ ಆಹ್ವಾನ
ಬೆಂಗಳೂರು, ಜ. 16: ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ವ್ಯಾಪ್ತಿಗೆ ಒಳಪಡುವ ಕಲೆಗಳಲ್ಲಿ ಸಂಶೋಧನೆ ಮತ್ತು ಅಧ್ಯಯನ ಮಾಡಲು 2015-16ನೆ ಸಾಲಿನ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ಜಾತಿ ಮತ್ತು ಪಂಗಡದ ಅರ್ಹ ಕಲಾವಿದರಿಂದ ಫೆಲೊಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಆಸಕ್ತರು ಸಂಶೋಧನೆ ಮತ್ತು ಅಧ್ಯಯನ ನಡೆಸುವ ವಿಷಯದ ಬಗ್ಗೆ ಸುಮಾರು 5-6 ಪುಟಗಳ ಸಾರಲೇಖನವನ್ನು ಅರ್ಜಿ ಜೊತೆಯಲ್ಲಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ಒಂದು ಲಕ್ಷ ರೂ.ಗಳು ಸಂಶೋಧನ ನೆರವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನಾಂಕವಾಗಿದ್ದು, ಆಸಕ್ತರು ತಮ್ಮ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ತು www.kannadasiri.co.in ವೆಬ್ ಸೈಟ್‌ನಲ್ಲಿ ಅರ್ಜಿಗಳನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡಮಿ ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-02 ಅನ್ನು ಸಂಪರ್ಕಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.