ಪರ್ಯಾಯ: ಸಚಿವೆ ಉಮಾಭಾರತಿ ಶ್ರೀಕೃಷ್ಣಮಠಕ್ಕೆ ಭೇಟಿ
ಉಡುಪಿ, ಜ.17: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯ ಶಿಷ್ಯೆ ಯಾಗಿರುವ ಕೇಂದ್ರ ಸಚಿವೆ ಸಚಿವೆ ಉಮಾ ಭಾರತಿ ಪರ್ಯಾಯದ ಹಿನ್ನೆಲೆ ಯಲ್ಲಿ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಳಗ್ಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಸಚಿವೆ ಶ್ರೀಕೃಷ್ಣ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಪರ್ಯಾಯ ಕಾಣಿ ಯೂರು ಸ್ವಾಮೀಜಿ ಸಚಿವೆ ಆಶೀವರ್ಚಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಉಮಾಭಾರತಿ, ನನ್ನ ಗುರುಗಳಾದ ಪೇಜಾವರ ಶ್ರೀಗಳ ಪರ್ಯಾಯದಲ್ಲಿ ನಾನು ಭಾಗವಹಿಸುತ್ತಿರುವುದು ಅತ್ಯಂತ ಸಂತೋಷ ಆಗು ತ್ತಿದೆ. ಇಲ್ಲಿ ನಾನು ರಾಜಕೀಯದ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ಇವರೊಬ್ಬರ ಶ್ರೇಷ್ಠ ಸನ್ಯಾಸಿ ಮಾತ್ರವಲ್ಲದೆ ಸಮಾಜ ಸುಧಾರಕರಾಗಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕಂದ್ಲಾಜೆ, ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಶ್ಯಾಮಲಾ ಕುಂದರ್, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಉಪಸ್ಥಿತರಿದರು.