ಐಸಿಸಿ ಟೆಸ್ಟ್ ರ್ಯಾಂಕಿಂಗ್: ಬ್ರಾಡ್ ನಂ.1 ಬೌಲರ್

Update: 2016-01-17 18:13 GMT

ದುಬೈ, ಜ.17: ಭಾರತದ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ನಂ.1 ಬೌಲರ್ ಸ್ಥಾನವನ್ನು ಕಳೆದುಕೊಂಡಿದ್ದಾರೆ. ದಕ್ಷಿಣ ಆಫ್ರಿಕ ವಿರುದ್ಧದ ಮೂರನೆ ಏಕದಿನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಇಂಗ್ಲೆಂಡ್‌ನ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ನಂ.1 ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಅಶ್ವಿನ್ ಆಲ್‌ರೌಂಡರ್‌ಗಳ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲೇ ಮುಂದುವರಿದಿದ್ದಾರೆ. ಬಾಂಗ್ಲಾದೇಶದ ಶಾಕಿಬ್ ಅಲ್ ಹಸನ್ ಎರಡನೆ ಸ್ಥಾನದಲ್ಲಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ದ.ಆಫ್ರಿಕದ ವಿರುದ್ಧ 3ನೆ ಟೆಸ್ಟ್ ಪಂದ್ಯ ಆರಂಭಕ್ಕೆ ಮೊದಲು ಬ್ರಾಡ್ ಮೂರನೆ ಸ್ಥಾನದಲ್ಲಿದ್ದರು. ಎರಡು ಇನಿಂಗ್ಸ್‌ಗಳಲ್ಲಿ ಒಟ್ಟು 8 ವಿಕೆಟ್‌ಗಳನ್ನು ಕಬಳಿಸಿದ ಬ್ರಾಡ್ 27 ಅಂಕವನ್ನು ಗಳಿಸಿ ಮೊದಲ ಸ್ಥಾನಕ್ಕೇರಿದರು. ಇದೀಗ ಬ್ರಾಡ್ 880 ಅಂಕ ಗಳಿಸಿದರೆ, ಅಶ್ವಿನ್ 791 ಅಂಕ ಹೊಂದಿದ್ದಾರೆ.

ಬ್ರಾಡ್ 2004ರ ನಂತರ ನಂ.1 ಸ್ಥಾನಕ್ಕೇರಿದ ಇಂಗ್ಲೆಂಡ್‌ನ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಸ್ಟೀವನ್ ಹಾರ್ಮಿಸನ್ ಕೇವಲ 120 ದಿನಗಳ ಕಾಲ ನಂ.1 ಬೌಲರ್ ಆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News