ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ ವಿವಿಯ ಉಪ ಕುಲಪತಿ, ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲು
Update: 2016-01-18 16:02 IST
ಹೈದರಾಬಾದ್, ಜ.18: ಸಂಶೋಧನಾ ವಿದ್ಯಾರ್ಥಿ .ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್ ಕೇಂದ್ರ ವಿವಿಯ ಉಪ ಕುಲಪತಿ ಮತ್ತು ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ವಿರುದ್ಧ ಪ್ರಕರಣ ದಾಖಲಾಗಿದೆ.
ಇವರ ವಿರುದ್ಧ ಎಸ್‌ಸಿ /ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವಿದ್ಯಾರ್ಥಿ ರೋಹಿತ್ ಆತ್ಮಹತ್ಯೆ ಬೆನ್ನಲ್ಲೆ ವಿದ್ಯಾರ್ಥಿಗಳು ವಿವಿ ಕುಲಪತಿ ವಿರುದ್ಧ ಪ್ರತಿಭಟನೆ ಆರಂಭಿಸಿ ಕ್ರಮಕ್ಕೆ ಒತ್ತಾಯಿಸಿದ್ದರು.