ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆಗೆ ಜಯಾ ಬಚ್ಚನ್
ಬೆಂಗಳೂರು,ಜ.18: ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಉದ್ಘಾಟನಾ ಸಮಾರಂಭವು ಜ.28ರಂದು ಸಂಜೆ 5:30ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಭಾರತೀಯ ಚಿತ್ರರಂಗದ ಹಿರಿಯ ಕಲಾವಿದೆ ಜಯಾ ಬಚ್ಚನ್ ಚಲನಚಿತ್ರೋತ್ಸವವನ್ನು ಉದ್ಘಾಟಿಸಲಿದ್ದು, ನಿರ್ದೇಶಕ, ನಿರ್ಮಾಪಕ ಸಂಜಯ್‌ಲೀಲಾ ಬನ್ಸಾಲಿ ಚಿತ್ರೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಚಿತ್ರ ಸಾಹಿತಿ ಗಳು ಹಾಗೂ ನಿರ್ದೇಶಕ ಗುಲ್ಝಾರ್, ಭಾರತೀಯ ಸಂಜಾತ ಹಾಲಿವುಡ್ ಚಿತ್ರ ನಿರ್ಮಾಪಕ ಅಶೋಕ್ ಅಮೃತ್‌ರಾಜ್ ಹಾಗೂ ಬೆಂಗಾಲಿ ಹಾಗೂ ಹಿಂದಿ ಚಿತ್ರನಟಿ ಮತ್ತು ನಿರ್ದೇಶಕಿ ಅಪರ್ಣಾ ಸೇನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಚಿತ್ರೋತ್ಸವದ ವಿವರಗಳು: 50 ದೇಶಗಳ 172 ಚಿತ್ರಗಳು 7 ದಿನಗಳ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಚಿತ್ರೋತ್ಸವದ ಸ್ಪರ್ಧೆಯಲ್ಲಿ ಏಶಿಯಾ ವಿಭಾಗದಿಂದ 12 ಚಿತ್ರಗಳು, ಭಾರತೀಯ ವಿಭಾಗದಲ್ಲಿ 13 ಚಿತ್ರಗಳು, ಕನ್ನಡ ವಿಭಾಗದಲ್ಲಿ 15 ಚಿತ್ರಗಳು ಪ್ರದರ್ಶನಗೊಳ್ಳುತ್ತಿದ್ದು ಹಂಗೇರಿಯ ಇಸ್ಟ್ವಾನ್ ಝೆಬೋ ಹಾಗೂ ಡೆನ್‌ಮಾರ್ಕ್‌ನ ನಿಲ್ಸ್ ಮ್ಯಾಲ್ಮರೋಸ್ ಅವರ ಚಿತ್ರಗಳ ವಿಶೇಷ ಪ್ರದರ್ಶ ನವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನೋಂದಣಿ ಕೇಂದ್ರಗಳು:
ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಭಾಗವಹಿಸಲು ಇಚ್ಛಿಸುವ ಆಸಕ್ತರು ನೋಂದಣಿ ಮಾಡಿಕೊಳ್ಳಬೇಕಾಗಿದ್ದು, ಬೆಂಗಳೂರಿನಲ್ಲಿ ಕರ್ನಾಟಕ ಚಲನಚಿತ್ರ ಅಕಾಡಮಿ, ಬಾದಾಮಿ ಹೌಸ್, ಸುಚಿತ್ರ ಫಿಲಂ ಸೊಸೈಟಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮೈಸೂರಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬ ಹುದಾಗಿದೆ.
ಸಮಾರೋಪ: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭವು ಫೆ.5ರಂದು ಮೈಸೂರಿನ ಅರಮನೆ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯಪಾಲ ವಿ.ಆರ್.ವಾಲಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಟ ಕಮಲಹಾಸನ್ ಭಾಗವಹಿಸು ತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.