ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
Update: 2016-01-18 23:25 IST
ಬಂಟ್ವಾಳ, ಜ. 18: ವಿಟ್ಲ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ವಿಟ್ಲ ಪೊಲೀಸ್ ಠಾಣೆಯಲ್ಲಿ ಊರ ಮುಖಂಡರ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಎಸ್ಸೈ ಪ್ರಕಾಶ್ ದೇವಾಡಿಗ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸತೀಶ್‌ಕುಮಾರ್ ಆಳ್ವ, ರಾಮ್‌ದಾಸ್ ಶೆಣೈ, ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು, ಸುದರ್ಶನ್ ಪಡಿಯಾರ್ ಮತ್ತಿತರರು ಉಪಸ್ಥಿತರಿದ್ದರು.