×
Ad

ವಿದ್ಯಾರ್ಥಿ ಸಾವು, ತನಿಖೆಗೆ ಆಗ್ರಹ

Update: 2016-01-18 23:50 IST

ಬೆಂಗಳೂರು, ಜ. 18: ಸಂಶೋಧನಾ ವಿದ್ಯಾರ್ಥಿ ರೋಹಿತ್ ಆತ್ಮಹತ್ಯೆಗೆ ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಅಬ್ದುಲ್ ಕಬೀರ್ ಆಗ್ರಹಿಸಿದ್ದಾರೆ.

 ದೇಶದ ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯವಸ್ಥಿತ ಅಸಮಾನತೆ ನುಸುಳಿರುವ ಕಾರಣವಿಂದು ಪ್ರತಿಭಾನ್ವಿತ ವಿದ್ಯಾರ್ಥಿಗಳು ಮೇಲೆ ಬರಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿರುವ ಅವರು, ರೋಹಿತ್ ಸಾವಿಗೆ ವಿಶ್ವವಿದ್ಯಾನಿಲಯ ಮತ್ತು ಆಡಳಿತ ಮಂಡಳಿಯವರ ಬೇಜಬ್ದಾರಿಯುತ ನಡವಳಿಕೆಯೇ ಕಾರಣವಾಗಿದೆ. ಆದ್ದರಿಂದ ವಿವಿಯು ದಲಿತ ವಿದ್ಯಾರ್ಥಿಗಳ ವಿರುದ್ಧ ನೀಡಿರುವಂತಹ ಅಮಾನತು ಆದೇಶವನ್ನು ಕೂಡಲೇ ವಾಪಸು ಪಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು, ದೌರ್ಜನ್ಯಗಳನ್ನು ತಡೆಯಲು ಮುಂದಾಗಬೇಕೆಂದು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News