ಜೈಷ್, ಮಸೂದ್ ವಿರುದ್ಧ ಯಾವುದೇ ಕ್ರಮಕೈಗೊಳ್ಳದ ಪಾಕ್
Update: 2016-01-19 10:59 IST
ಹೊಸದಿಲ್ಲಿ, ಜ.19: ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನ ಈ ತನಕ ಜೈಷ್ ಮುಖ್ಯಸ್ಥ ಮೌಲಾನ ಮಸೂದ್ ಅಝರ್ ಸೇರಿದಂತೆ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.
ಮಸೂದ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರೂ, ಆತನನ್ನು ಈ ತನಕ ವಿಚಾರಣೆಗೊಳಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಈ ನಿಲುವಿನಿಂದಾಗ ಭಾರತ ಮತ್ತು ಪಾಕಿಸ್ತಾನಗಳ ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ.