×
Ad

ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನ

Update: 2016-01-19 18:21 IST

ಮಂಗಳೂರು,ಜ.19: ಜಿಲ್ಲಾ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಆಶ್ರಯದಲ್ಲಿ ಇಂದು ನಗರದ ಪೊಲೀಸ್ ಸಮುದಾಯ ಭವನದಲ್ಲಿ 27 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2016ರ ಸಮಾರೋಪ ಸಮಾರಂಭದಲ್ಲಿ ಟ್ರಾಫಿಕ್ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯವೆಸಗಿದ ಆರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಪೊಲೀಸ್ ಸಿಬ್ಬಂದಿಗಳಾದ ನೀಲಪ್ಪ, ಸ್ಪೂರ್ತಿ ಹೆಗ್ಡೆ, ಬಾಬು ಶೆಟ್ಟಿ ಯಶವಂತ, ದಿನೇಶ್.ಪಿ.ಸನಿಲ್ ,ಉದಯ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರು ಪೊಲೀಸ್ ಕಮೀಷನರ್ ಎಂ. ಚಂದ್ರಶೇಖರ್ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜನರ ಸಹಕಾರವು ಅಗತ್ಯವಿದೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸಹಕಾರ ನೀಡಿದ ನಾಗರಿಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.


   ಕಾರ್ಯಕ್ರಮದಲ್ಲಿ ಮಾತನಾಡಿದ ಉಪಸಾರಿಗೆ ಆಯುಕ್ತ ಜಿ. ಎಸ್. ಹೆಗಡೆ ಪಂಪ್‌ವೆಲ್‌ನಿಂದ ತಲಪಾಡಿ, ಬಿ.ಸಿ.ರೋಡ್, ಸುರತ್ಕಲ್‌ಗೆ ಹೋಗುವ ಹೆದ್ದಾರಿಯಲ್ಲಿ ಬಸ್ ನಿಲ್ದಾಣಕ್ಕೆ ವ್ಯವಸ್ಥೆಯಿಲ್ಲ. ಈ ಹಿನ್ನೆಲೆಯಲ್ಲಿ ಬಸ್ ಬೇ ನಡೆಸಲು ಚಿಂತಿಸಲಾಗಿದೆ. ಈ ಬಗ್ಗೆ ಜಾಗ ಗುರುತಿಸಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರವನ್ನು ಬರೆಯಲಾಗಿದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮನಪಾ ಮೇಯರ್ ಜೆಸಿಂತಾ ವಿಜಯ್ ಆಲ್ಪ್ರೆಡ್ ವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.


  ಸಮಾರಂಭದಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಸ್.ಡಿ.ಶರಣಪ್ಪ, ದ.ಕ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ನೆಲ್ಸನ್ ಪಿರೇರಾ, ಮುಖ್ಯ ಟ್ರಾಫಿಕ್ ವಾರ್ಡನ್ ಜೋ ಗೋನ್ಸಾಲ್ವಿಸ್ , ಮಂಗಳೂರು ಡಿಸಿಪಿ ಸಂಜೀವ್ ಪಾಟೀಲ್, ಅಡಿಷನಲ್ ಪೊಲೀಸ್ ವರಿಷ್ಠಾಧಿಕಾರಿ ವಿನ್ಸೆಂಟ್ ಶಾಂತಕುಮಾರ್ ಉಪಸ್ಥಿತರಿದ್ದರು.

     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News