ಮಂಗಳೂರು: ಆಬಾ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ
Update: 2016-01-19 20:24 IST
ಮಂಗಳೂರು,ಜ.19: ಆಬಾ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ವಿದ್ಯಾರ್ಥಿನಿಯರಲ್ಲಿ ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸುವ ಸಲುವಾಗಿ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ॥ ಮಾಲಿನಿ ಹೆಬ್ಬಾರ್ ಆಗಮಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸಾಹಿತ್ಯದ ಬಗ್ಗೆ ತಿಳಿಯಬೇಕಾದರೆ ಪುಸ್ತಕಗಳನ್ನು ಓದುವ ವಿಷಯಗಳನ್ನು ಗ್ರಹಿಸುವ ಹಾಗೂ ವಿವಿಧ ರೀತಿಯಲ್ಲಿ ಆಲೋಚನೆ ಮಾಡುವ ಕಲೆಯನ್ನು ಹೊಂದಿರಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಕುಮಾರಿ ಶ್ವೇತಾ ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ಸಂಚಾಲಕರಾದ ನಜರತ್ ಸ್ವಾಗತಿಸಿದರು, ವಿದ್ಯಾರ್ಥಿನಿಯಾದ ನಶೀಯಾ ವಂದಿಸಿದರು, ಸಾನ್ವಿ ಕಾರ್ಯಕ್ರಮ ನಿರೂಪಿಸಿದರು.