×
Ad

ದಲಿತ ವಿದ್ಯಾರ್ಥಿ ಆತ್ಮಹತ್ಯೆಯನ್ನು ಖಂಡಿಸಿ ಇಂದು ಪ್ರತಿಭಟನೆ

Update: 2016-01-19 23:32 IST

ಮಂಗಳೂರು, ಜ.19: ಹೈದರಾಬಾದ್‌ನ ಕೇಂದ್ರೀಯ ವಿಶ್ವದ್ಯಾನಿಲಯದ ವಿದ್ಯಾರ್ಥಿ ದಲಿತ ಮುಖಂಡ ವೇಮುಲಾ ರೋಹಿತ್‌ರ ಬಲವಂತದ ಸಾವಿಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಜ.20ರಂದು ಬೆಳಗ್ಗೆ ಹತ್ತು ಗಂಟೆಗೆ ಡಿವೈಎಫ್‌ಐ, ಎಸ್‌ಎಫ್‌ಐ, ದಲಿತ ಹಕ್ಕುಗಳ ಸಮಿತಿ, ಹಲವು ಜನಪರ ಸಂಘಟನೆಗಳು ಒಟ್ಟು ಸೇರಿ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದೆ.
 
ವಿನಾಕಾರಣ ವಿದ್ಯಾರ್ಥಿ ರೋಹಿತ್ ಸೇರಿ ಐವರು ದಲಿತ ಸಂಶೋಧನಾ ವಿದ್ಯಾರ್ಥಿಗಳನ್ನು ಹಾಸ್ಟೆಲಿನಿಂದ ಅಮಾನತು ಮಾಡುವಲ್ಲಿ ಎಬಿವಿಪಿ ಸಂಘಟನೆ ಮಾಡಿರುವಂತಹ ವಾದವೇ ಆತ್ಮಹತ್ಯೆಗೆ ಪ್ರಚೋದಿಸಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ನ ಬಲವಂತದ ಸಾವಿಗೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News