ಬಸ್-ಬೈಕ್ ಢಿಕ್ಕಿ: ಯುವಕ ಮೃತ್ಯು
Update: 2016-01-19 23:34 IST
ಮಂಜೇಶ್ವರ, ಜ.19: ಬಸ್-ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದ್ದು, ಪಡ್ರೆ ಎಡಮಲೆ ಮೈಕಾನದ ದಿ. ಕೃಷ್ಣನಾಯ್ಕರ ಪುತ್ರ ಐತ್ತಪ್ಪ(25) ಮೃತಪಟ್ಟವರೆಂದು ಗುರುತಿಸಲಾಗಿದೆ.
ಬಡಗಿಯಾಗಿದ್ದ ಇವರು ಸೋಮ ವಾರ ಸಂಜೆ 5 ಗಂಟೆಗೆ ಕೆಲಸ ಮುಗಿಸಿ ಸಹ ಕಾರ್ಮಿಕರೊಂದಿಗೆ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಆರ್ಲಪದವು ಸಮೀಪ ಇವರು ಚಲಾಯಿಸುತ್ತಿದ್ದ ಬೈಕ್ ಹಾಗೂ ಖಾಸಗಿ ಬಸ್ ಪರಸ್ಪರ ಢಿಕ್ಕಿಯಾಯಿತು.
ಢಿಕ್ಕಿಯ ರಭಸಕ್ಕೆ ಬೈಕ್ ಸಹಿತ ಐತ್ತಪ್ಪರು ರಸ್ತೆ ಬದಿಗೆ ಎಸೆಯಲ್ಪಟ್ಟು, ಪಕ್ಕದ ಕೊಳವೆ ಬಾವಿಯ ಹ್ಯಾಂಡ್ ಪಂಪ್‌ಗೆ ತಲೆ ಬಡಿದು ಗಂಭೀರ ಗಾಯಗೊಂಡರು. ತಕ್ಷಣ ಇವರನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದರು. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಮನೆಗೆ ತಂದು ಸಂಸ್ಕರಿಸಲಾಯಿತು. ಮೃತರು ಓರ್ವ ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.