ಇಂದಿನಿಂದ ಹೆಲ್ಮೆಟ್ ಕಡ್ಡಾಯ
Update: 2016-01-19 23:45 IST
ಧರಿಸದಿದ್ದರೆ ದಂಡ
ಬೆಂಗಳೂರು, ಜ.19: ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಕ್ರಮ ನಾಳೆಯಿಂದ ಕಟ್ಟುನಿಟ್ಟಾಗಿ ಜಾರಿಯಾಗಲಿದೆ. ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ 12 ವರ್ಷ ಮೇಲ್ಪಟ್ಟ ಮಕ್ಕಳು ಸೇರಿದಂತೆ ಎಲ್ಲರೂ ಹೆಲ್ಮೆಟ್ ಧರಿಸುವುದು ಅನಿರ್ವಾಯವಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯಾದ್ಯಂತ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ.
ಈ ಬಗ್ಗೆ ಕಳೆದ ಕೆಲವು ದಿನಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಮತ್ತು ಸಂಘ ಸಂಸ್ಥೆಗಳಿಂದ ಪರಿಣಾಮಕಾರಿಯಾಗಿ ಮಾಡಲಾಗಿದ್ದು, ನಾಳೆಯಿಂದ ಬೈಕ್‌ಗಳಲ್ಲಿ ಚಲಿಸುವ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲದಿದ್ದರೆ ದಂಡ ಕಟ್ಟಲು ಸಿದ್ಧರಾಗಬೇಕು.
ಈಗಾಗಲೇ ದ್ವಿಚಕ್ರ ವಾಹನ ಸವಾರರು, ಹಿಂಬದಿ ಸವಾರರು ಬಹುತೇಕ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುತ್ತಿರುವುದು ಕಂಡು ಬರುತ್ತಿದೆ.