×
Ad

ವೀಕ್ಷಕರ ವರದಿ ಆಧಾರದಲ್ಲಿ ಟಿಕೆಟ್: ಪರಮೇಶ್ವರ್

Update: 2016-01-19 23:58 IST

ಬೆಂಗಳೂರು, ಜ.19: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ರಚಿಸಲಾಗಿರುವ ವೀಕ್ಷಕರ ಸಮಿತಿ ನೀಡುವ ಆಧಾರದಲ್ಲಿ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.


ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಪಕ್ಷದಲ್ಲಿ ಕೆಲವು ಮಾನದಂಡಗಳಿವೆ. ಅದರನ್ವಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು. ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವೀಕ್ಷಕರು ವರದಿ ನೀಡಿದ ಬಳಿಕ ತಾನು ಈ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡುತ್ತೇನೆ. ಆನಂತರ, ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News