ಎಸ್ಸೆಸ್ಸೆಫ್: ವಿಕಲಚೇತನ ವೇತನ ಯೋಜನೆಗೆ ಚಾಲನೆ
Update: 2016-01-20 00:16 IST
ಉಳ್ಳಾಲ,ಜ.19:ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ಸರ್ವಿಸ್ ಆಶ್ರಯದಲ್ಲಿ ‘ವಿಕಲಚೇತನ ವೇತನ’ ಯೋಜನೆಯನ್ನು ಅಖಿಲ ಭಾರತ ಸುನ್ನಿ ಜಂಇಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಉದ್ಘಾಟಿಸಿದರು.
ಈ ಸಂದರ್ಭ ಯೆನೆಪೊಯ ವಿವಿಯ ಕುಲಾಧಿಪತಿ ವೈ. ಅಬ್ದುಲ್ಲ ಕುಂಞಿ, ಸಿರಾಜುಲ್ ಹುದಾ ಕುಟ್ಯಾಡಿಯ ಅಧ್ಯಕ್ಷ ಪೆರೋಡ್ ಅಬ್ದುರ್ರಹ್ಮಾನ್ ಸಖಾಫಿ, ಸಚಿವ ಯು.ಟಿ.ಖಾದರ್, ದ.ಕ. ಜಿಲ್ಲಾ ವಕ್ಪ್ ಸಲಹಾ ಸಮಿತಿಯ ಅಧ್ಯಕ್ಷ ಎಸ್,ಎಂ.ರಶೀದ್ ಹಾಜಿ, ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ಅಧ್ಯಕ್ಷ ಇಲ್ಯಾಸ್ ಸಖಾಫಿ, ಉಳ್ಳಾಲ ಎಸ್‌ವೈಎಸ್ ಅಧ್ಯಕ್ಷ ಬಶೀರ್ ಅಹ್ಸನಿ ತೋಡಾರ್, ಶರಫುದ್ದೀನ್ ತಂಙಳ್ ಮದನಿನಗರ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕೋಶಾಧಿಕಾರಿ ಅಲ್ತಾಫ್ ಕುಂಪಲ ಉಪಸ್ಥಿತರಿದ್ದರು.