ಕಾಂಗ್ರೆಸ್‌ಗೆ ನೇಮಕ
Update: 2016-01-20 00:19 IST
ಮಂಗಳೂರು, ಜ.19: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಾ. ವೀರಪ್ಪ ಮೊಯ್ಲಿ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ಅವರು ಎಂ.ಬಿ.ಎಂ ಹಯಾತುಲ್ಲಾ ಕಾಮಿಲ್‌ರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.