×
Ad

ಹೆಬ್ಬಾಳ ವಿಧಾನಸಭಾ ಉಪ ಚುನಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಖರ್ಗೆ

Update: 2016-01-20 22:49 IST

ಬೆಂಗಳೂರು, ಜ.20: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಪಾತ್ರ ಏನಿಲ್ಲವೆಂದು ಕಾಂಗ್ರೆಸ್ ಸಂಸ ದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಪಡಿಸಿದ್ದಾರೆ.
  ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಒಮ್ಮತಾಭಿಪ್ರಾಯದಿಂದ ಅಭ್ಯರ್ಥಿಯ ಅಂತಿಮಗೊಳಿಸುತ್ತಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವೆಂದು ತಿಳಿಸಿದರು.
ಹೆಬ್ಬಾಳ ವಿಧಾನಸಭಾ ಉಪ ಚುನಾವಣೆಗೆ ಆಕಾಂಕ್ಷಿಗಳು ಹೆಚ್ಚಾಗಿರುವುದು ಸಹಜ. ಆಕಾಂಕ್ಷಿಗಳು ನಮ್ಮ ಮನೆಗೆ ಬರುತ್ತಾರೆ. ಯಾರನ್ನೂ ನಾನು ಬರಬೇಡಿ ಎಂದು ಹೇಳಲಾಗುವುದಿಲ್ಲ. ಆದರೆ, ಈ ಆಯ್ಕೆ ವಿಷಯದಲ್ಲಿ ಯಾವ ಕಾರಣಕ್ಕೂ ಮಧ್ಯೆ ಪ್ರವೇಶಿಸುವುದಿಲ್ಲವೆಂದು ಅವರು ತಿಳಿಸಿದರು.
 ಪಕ್ಷದ ಎಲ್ಲ ನಾಯಕರು ಹೈಕಮಾಂಡ್ ಆದೇಶಕ್ಕೆ ಬದ್ಧರಾಗಿರುತ್ತೇವೆ. ಟಿಕೆಟ್ ನೀಡುವ ಅಭ್ಯರ್ಥಿಯ ಪರವಾಗಿ ಒಟ್ಟಾಗಿ ಕೆಲಸ ಮಾಡಿ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News