×
Ad

ನಾಳೆ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಚೆಕ್‌ಗಳ ವಿತರಣೆ

Update: 2016-01-22 00:09 IST

ಮಂಗಳೂರು, ಜ.21: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ.ಕ. ಜಿಲ್ಲೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸಾಲಸೌಲಭ್ಯಗಳ ಯೋಜನೆಗಳಲ್ಲಿ ಮಂಜೂರಾದ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸುವ ಕಾರ್ಯಕ್ರಮ ಜ.23ರಂದು ನಡೆಯಲಿದೆ.
ಅಂದು ಬೆಳಗ್ಗೆ 9:30ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಲೊಯೊಲ ಹಾಲ್‌ನಲ್ಲಿ ವಿತರಣೆ ನಡೆಲಿದೆ. ಇದೇ ಸಂದರ್ಭ 2016-17ನೆ ಸಾಲಿನ ಅರಿವು ಸಿಇಟಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News