ಬೆಂಗಳೂರು; ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯದ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ
ಬೆಂಗಳೂರು.ಜ.22:ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯದ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಾದ್ಯಂತ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದರು ಸಹ ನೆಲಮಂಗಲ ತಾಲ್ಲೂಕು ಬಿಲ್ಲಿನಕೋಟೆ ಗ್ರಾಮದಲ್ಲಿ 238.380 ಲೀಟರ್ ಮದ್ಯ ಹಾಗೂ 214.100 ಲೀಟರ್ ಬಿಯರ್‌ನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ. ಭರತ್ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ರೀತಿ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿ ಅರೇಹಳ್ಳಿ ಕ್ರಾಸ್ ಬಳಿ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನಲ್ಲಿ 5.300 ಲೀಟರ್ ಮದ್ಯ ಹಾಗೂ 7.800 ಲೀಟರ್ ಬಿಯರ್‌ನ್ನು ಅಕ್ರಮವಾಗಿ ಸಾಗಾಣೆ ಮಾಡಿತ್ತಿರುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತಹಚ್ಚಿ ಮುನಿರಾಜು ಮತ್ತು ರವಿಕುಮಾರ್ ಅವರುಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 2.90 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿರುವುದಲ್ಲದೆ ಜಿಲ್ಲೆಯಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಪಾಲಯ್ಯ ತಿಳಿಸಿದ್ದಾರೆ.
ಆಲ್ ಇಂಡಿಯಾ ಕ್ರಿಶ್ಚಿಯನ್ ಡೆಮೋಕ್ರೇಟಿಕ್ ಫ್ರೆಂಟ್ ಅಧ್ಯಕ್ಷ ಕೆ. ಸ್ಯಾಮುಯಲ್ ಚಾಕೋ ನೇತೃತ್ವದ ನಿಯೋಗ ಏಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಕ್ರೈಸ್ತ ಸಮುದಾಯದ ಪ್ರಾಟೆಸ್ಟೆಂಟ್ ಸಮುದಾಯಕ್ಕೆ ಸರ್ಕಾರ ಹಾಗೂ ಪಕ್ಷದಲ್ಲಿ ಸೂಕ್ತ ಪ್ರಾತಿನಿಧ್ಯೆ ಕಲ್ಪಿಸುವಂತೆ ಮನವಿ ಮಾಡಿತು.