ಕಾರು ಢಿಕ್ಕಿ: ಸೈಕಲ್ ಸವಾರ ಮೃತ್ಯು
Update: 2016-01-22 23:41 IST
ಕುಂದಾಪುರ, ಜ.22: ಗೋಪಾಡಿ ಗ್ರಾಮದ ಬೊಬ್ಬರ್ಯ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.21ರಂದು ರಾತ್ರಿ 9:30ರ ಸುಮಾರಿಗೆ ಕಾರೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಲೋಕನಾಥ ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಿಲ್ಲಿಸಿದ್ದ್ದ ಸೈಕಲ್‌ಗೆ ಢಿಕ್ಕಿ ಹೊಡೆಯಿತು. ಇದರಿಂದ ಸವಾರ ಲೋಕನಾಥ ಗಂಭೀರವಾಗಿ ಗಾಯಗೊಂಡು ಕೋಟೇಶ್ವರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ದಲಿತ ಸಂಘರ್ಷ ಸಮಿತಿಯ ಕಾರ್ಯ ಕರ್ತರಾಗಿರುವ ಇವ ರು ಕೂಲಿ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.