ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Update: 2016-01-22 23:56 IST
ಉಡುಪಿ, ಜ.22: 2014-15ನೆ ಸಾಲಿನ ಸರಕಾರಿ ಕಿರಿಯ ಹಾಗೂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿ ತಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ (www.school education.kar.nic.in)ನಲ್ಲಿ ಪ್ರಕಟಿಸಲಾಗಿದೆ.
ಖಾಲಿಹುದ್ದೆಗಳ ವಿವರಗಳನ್ನು ಜ.25ರಂದು ಇಲಾಖಾ ವೆಬ್‌ಸೈಟ್ www.ddpiudupi.inನಲ್ಲಿ ಹಾಗೂ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜ.27ರಂದು ಬೆಳಗ್ಗೆ 10ಕ್ಕೆ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ ಮಣಿಪಾಲ ಇಲ್ಲಿಗೆ ತಮ್ಮ ಮೂಲ ದಾಖಲೆಗಳೊಂದಿಗೆ, ಒಂದು ಸೆಟ್ ಝೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ ಮತ್ತು 5 ಭಾವಚಿತ್ರಗಳೊಂದಿಗೆ ಸ್ಥಳ ಆಯ್ಕೆ ಪ್ರಕ್ರಿಯೆ ಕೌನ್ಸೆಲಿಂಗ್‌ಗೆ ಹಾಜರಾಗಬೇಕು ಎಂದು ಪ್ರಕಟನೆ ತಿಳಿಸಿದೆ.