ಉಡುಪಿ: ನಾಳೆ ದಸಂಸದಿಂದ ಪ್ರತಿಭಟನೆ
Update: 2016-01-22 23:59 IST
ಡುಪಿ, ಜ.22: ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಂಶೋಧನಾ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜ.24ರಂದು ಉಡುಪಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾ ಲಕ ಶ್ಯಾಮ್‌ರಾಜ್ ಬಿರ್ತಿ ತಿಳಿಸಿದ್ದಾರೆ.
ಬೆಳಗ್ಗೆ 10:30ಕ್ಕೆ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಕ್ಲಾಕ್ ಟವರ್ ಬಳಿ ನಡೆಯುವ ಈ ಪ್ರತಿಭಟನೆಯಲ್ಲಿ ದಲಿತ ಚಿಂತಕ ಜಯನ್ ಮಲ್ಪೆ, ವಕೀಲ ಮಂಜುನಾಥ ಗಿಳಿಯಾರು, ವಾಸುದೇವ ಮುದ್ದೂರು, ಚಂದ್ರಶೇಖರ ಹೆಬ್ರಿ, ರಾಜು ಬೆಟ್ಟಿನಮನೆ, ಮಾಲಿಂಗ ಕೋಟ್ಯಾನ್, ರಘು ಕಾರ್ಕಳ ಮುಂತಾದ ಜಿಲ್ಲಾ ದಲಿತ ನಾಯಕರು ಭಾಗವಹಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.