ಮಂಗಳೂರು: ಸಾಲ ಸೌಲಭ್ಯಗಳ ಚೆಕ್ ವಿತರಣೆ, ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರ
Update: 2016-01-23 11:28 IST
ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರದ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳ ಚೆಕ್ ವಿತರಣೆ ಹಾಗೂ ಅರಿವು ಸಿಇಟಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರ ವನ್ನು ಮಾಜಿ ಕೇಂದ್ರ ಸಚಿವ ಆಸ್ಕರ್ ಪೆರ್ನಾಂಡಿಸ್ ಉದ್ಘಾಟಿಸಿದರು
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದ ಪ್ರಗತಿಯಲ್ಲಿ ಯಾರು ಹಿಂದುಳಿಯಬಾರದು.ಎಲ್ಲರನ್ನೂ ಪ್ರಗತಿಯೊಂದಿಗೆ ಸೇರಿಸಿಕೊಂಡು ಹೋಗುವ ಉದ್ದೇಶದಿಂದ ಸರಕಾರದ ಈ ಯೋಜನೆ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ,ಶಾಸಕ ಜೆ.ಆರ್.ಲೋಬೊ,ವಿಧಾನಪರಿಷತ್ತು ಸದಸ್ಯ ಐವನ್ ಡಿಸೊಜ, ಮನಪಾ ಮೇಯರ್ ಜೆಸಿಂತ ವಿಜಯ್ ಆಲ್ಫ್ರೆಡ್, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ. ಮಸೂದ್ ಪೌಜ್ದಾರ್, ಅಲೋಸಿಯಸ್ ಪಿ.ಯು.ಕಾಲೇಜು ಪ್ರಾಂಶುಪಾಲ ಮೆಲ್ವಿನ್ ಮೆಂಡೊನ್ಸಾ ಮುಂತಾದವರು ಉಪಸ್ಥಿತರಿದ್ದರು.