ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
Update: 2016-01-23 23:25 IST
ಶಿರ್ವ, ಜ.23: ಪಾದೂರು ಗ್ರಾಮದ ಕಾಪು -ಶಿರ್ವ ರಸ್ತೆಯ ಬೋರ್‌ವೆಲ್ ಬಳಿ ಜ.22ರಂದು ಬೆಳಗ್ಗೆ 9:15ರ ಸುಮಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಚಂದ್ರನಗರದ ನಿವಾಸಿ ಸುಲೈಮಾನ್(52) ಎಂದು ಗುರುತಿಸಲಾಗಿದೆ. ಶಿರ್ವದಿಂದ ಕಾಪು ಕಡೆ ಹೋಗುತ್ತಿದ್ದ ಬೈಕ್, ಕೆಲಸಕ್ಕಾಗಿ ಜನತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಲೈಮಾನ್‌ರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.