ಉತ್ತಮ ಶಿಕ್ಷಕ ಪ್ರಶಸ್ತಿ ಗೌರವ
Update: 2016-01-23 23:39 IST
ಉಡುಪಿ, ಜ.23: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಉಡುಪಿ ಮೈನ್ ಮಹಾತ್ಮಗಾಂಧಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಂಭು ಸುವರ್ಣ ಕೆ. ಇವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘವು ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾದ ಅಖಿಲ ಭಾರತ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದಲ್ಲಿ ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಹೆಸರಿನಲ್ಲಿ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.