‘ವಿದ್ಯುತ್ ಉಳಿತಾಯದಿಂದ ಪರಿಸರ ಸಂರಕ್ಷಣೆ ಸಾಧ್ಯ’
ಬೆಂಗಳೂರು, ಜ. 23: ವಿದ್ಯುತ್‌ಅನ್ನು ಮಿತವಾಗಿ ಬಳಸಬೇಕು. ವಿದ್ಯುತ್ ಉಳಿತಾಯದಿಂದ ಪರಿಸರ ಸಂರಕ್ಷಣೆ ಸಾಧ್ಯ ಎಂದು ಬೆಸ್ಕಾಂ ಅಧಿಕಾರಿ ರಾಜಶೇಖರ್ ತಿಳಿಸಿದ್ದಾರೆ.
ಶನಿವಾರ ವಿದ್ಯುಚ್ಛಕ್ತಿ ಸುರಕ್ಷತೆ, ಕಳ್ಳತನ ಮತ್ತು ಉಳಿತಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆಸ್ಕಾಂ) ಮತ್ತು ಬೆಂಗಳೂರಿನ ಸ್ಟೆಪ್ಸ್ ಸಂಸ್ಥೆ ಸಹಭಾಗಿತ್ವದಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಪಂನಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬೆಸ್ಕಾಂ ಸದಾ ನಿಮ್ಮಾಟ್ಟಿಗೆ ಇರಲಿದ್ದು, ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ಸಾರ್ವಜನಿಕರು ನೇರವಾಗಿ ಬೆಸ್ಕಾಂ ಸಂಸ್ಥೆಯನ್ನು ಸಂಪರ್ಕಿಸಬೇಕು ಎಂದ ಅವರು, ವಿದ್ಯುತ್ ಉಳಿತಾಯ ಮಾಡುವ ದೃಷ್ಟಿಯಿಂದ ಸಾರ್ವಜನಿಕರು ಎಲ್‌ಇಡಿ ಬಲ್ಬ್‌ಗಳನ್ನು ಬಳಸಬೇಕು ಎಂದು ಮನವಿ ಮಾಡಿದರು.
ವಿಚಾರ ಸಂಕಿರಣದಲ್ಲಿ ಸ್ಟೆಪ್ಸ್‌ನ ಅಧ್ಯಕ್ಷ ಟಿ.ಎಂ.ಪ್ರಕಾಶ್, ಪದಾಧಿಕಾರಿಗಳಾದ ಬಾಬು, ಗಿರೀಶ್, ಸಂಪನ್ಮೂಲ ವ್ಯಕ್ತಿ ರಘುನಾಥ್, ನಾರಾಯಣ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.