ಬೆಂಗಳೂರು ಗ್ರಾಮಾಂತರ ಜಿಲ್ಲೆ: ನಾಳೆಯಿಂದ ಶಿಕ್ಷಕರ ನೇಮಕಾತಿಗೆ ಕೌನ್ಸೆಲಿಂಗ್

Update: 2016-01-23 18:20 GMT

ಬೆಂಗಳೂರು, ಜ. 23: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2014-15ನೆ ಸಾಲಿನ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.

ಕೌನ್ಸೆಲಿಂಗ್‌ನ್ನು ಜ.25, 27 ಮತ್ತು 28ರಂದು ಬೆಳಗ್ಗೆ 10ಗಂಟೆಗೆ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಏರ್ಪಡಿಸಲಾಗಿದೆ ಎಂದು ಉಪನಿರ್ದೇಶಕರು(ಆಡಳಿತ) ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜ.27ರಂದು 1ರಿಂದ 5 ಸಾಮಾನ್ಯ ಕನ್ನಡ, ಉರ್ದು. 27ರಂದು 6ರಿಂದ 8 ಸಾಮಾನ್ಯ ಕನ್ನಡ, ಉರ್ದು ಭಾಷಾ ಶಿಕ್ಷಕರಿಗೆ ಮತ್ತು 28ರಂದು ಆಂಗ್ಲ ಭಾಷಾ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಲಾಗುವುದು.

ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ರವಾನಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ಮೇಲ್ಕಂಡ ದಿನಗಳಂದು ನಡೆಯುವ ಕೌನ್ಸೆಲಿಂಗ್‌ನಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News