ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ‘ನಿರಂಜನ ಪ್ರಶಸ್ತಿ’
Update: 2016-01-24 00:13 IST
ಪುತ್ತೂರು, ಜ.23: ಇಲ್ಲಿನ ವಿವೇಕಾನಂದ ಕಾಲೇಜಿನ ಡಾ.ಶಿವರಾಮ ಕಾರಂತ ಅಧ್ಯಯನ ಕೇಂದ್ರ ಹಾಗೂ ಕನ್ನಡ ಸಂಘದ ಆಶ್ರಯದಲ್ಲಿ ಕೊಡಮಾಡುವ ಪ್ರತಿಷ್ಠಿತ ‘ನಿರಂಜನ ಪ್ರಶಸ್ತಿ’ಗೆ ಪ್ರಸ್ತುತ ವರ್ಷದಲ್ಲಿ ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಫೆ.2ರಂದು ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.