ಸಿಎಂ ಸಿದ್ದರಾಮಯ್ಯಗೆ ನಿಂದನೆ: ಯುವಕನ ಬಂಧನ
Update: 2016-01-24 00:15 IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿ ಅವಹೇಳನ ಮಾಡಿದ ಆರೋಪದ ಮೇಲೆ ರೋಷನ್ ಎಂಬವನನ್ನು ಇಲ್ಲಿನ ವಿಧಾನಸೌಧ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಜ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ ಪ್ರವಾಸದಲ್ಲಿದ್ದ ವೇಳೆ ಬಳ್ಳಾರಿ ನಗರ ಪಾಲಿಕೆ ಆಯುಕ್ತ ರಮೇಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಖಾಸಗಿ ಸುದ್ದಿವಾಹಿನಿಗಳ ವರದಿ ಹಿನ್ನೆಲೆಯಲ್ಲಿ ರೋಷನ್ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ ಪ್ರಕಟಿಸಿದ್ದ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿದ್ದ ವಿಧಾನಸೌಧ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ತನಿಖೆ ಕೈಗೊಂಡಿದ್ದಾರೆ.
ಈ ಮಧ್ಯೆ ಬಳ್ಳಾರಿ ನಗರ ಪಾಲಿಕೆ ಆಯುಕ್ತರಿಗೆ ಮುಖ್ಯಮಂತ್ರಿ ಕಪಾಳಮೋಕ್ಷ ಮಾಡಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.