×
Ad

ತಮಿಳುನಾಡು: ಮೂವರು ವೈದ್ಯವಿದ್ಯಾರ್ಥಿಗಳ ಆತ್ಮಹತ್ಯೆ

Update: 2016-01-24 08:55 IST

ಚೆನ್ನೈ: ಸಮೀಪದ ವೆಲ್ಲುಪುರಂ ಖಾಸಗಿ ವೈದ್ಯಕೀಯ ಕಾಲೇಜಿನ ಮೂವರು ವೈದ್ಯಕೀಯ ವಿದ್ಯಾರ್ಥಿನಿಯರು ಶನಿವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಮೂವರು ಎಸ್‌ವಿಎಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗವಿಜ್ಞಾನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು.

ಪೊಲೀಸರು ಆತ್ಮಹತ್ಯೆ ಟಿಪ್ಪಣಿ ವಶಪಡಿಸಿಕೊಂಡಿದ್ದು, ಇದರಲ್ಲಿ ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿಯೇ ತಮ್ಮ ಈ ನಿರ್ಧಾರಕ್ಕೆ ಕಾರಣ ಎಂದು ಆಪಾದಿಸಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಯುತ್ತಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಹೈದ್ರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ರೋಹಿತ್ ವೆಮುಲಾ ಎಂಬ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ದೇಶವ್ಯಾಪಿ ಹೋರಾಟ ಆರಂಭವಾದ ಬೆನ್ನಲ್ಲೇ, ಈ ಘಟನೆ ಬೆಳಕಿಗೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News