×
Ad

ಮಂಗಳೂರು : ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಶೇಖ್ ಹಸನ್ ಆಯ್ಕೆ

Update: 2016-01-25 16:43 IST

ದ.ಕ. ಜಿಲ್ಲಾ ಮಟ್ಟದ ಪ್ರಶಸ್ತಿಗೆ 6 ಮಂದಿ ಆಯ್ಕೆ

ಮಂಗಳೂರು, ಜ.25: ಸರಕಾರಿ ಸೇವೆಯಲ್ಲಿ ಸೇವೆ ಸಲ್ಲಿಸುವ ಅಕಾರಿಗಳನ್ನು ಗುರುತಿಸಿ ನೀಡಲಾಗುವ ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ದ.ಕ. ಜಿಲ್ಲಾಕಾರಿ ಕಚೇರಿಯ ಕಂದಾಯ ವಿಭಾಗದ ಅೀಕ್ಷಕ ಶೇಖ್ ಹಸನ್ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಕಾರಿ ಎ.ಬಿ. ಇಬ್ರಾಹೀಂ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ಗಣರಾಜ್ಯೋತ್ಸವ ಸಮಾರಂಭದಲ್ಲಿ ನೀಡಲಾಗುವ ಈ ಪ್ರಶಸ್ತಿಗೆ ಆಯ್ಕೆಯಾದ 8 ಮಂದಿಯಲ್ಲಿ ಶೇಕ್ ಹಸನ್ ಒಬ್ಬರಾಗಿದ್ದು, ಇದು ಜಿಲ್ಲೆಗೆ ಸಂದ ಗೌರವವಾಗಿದೆ ಎಂದರು.

ಸರಕಾರಿ ನೌಕರರ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರ ಹಿಂದೆ ನಾಗರಿಕ ಸೇವಾ ಪ್ರಶಸ್ತಿಯನ್ನು ನೀಡುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ಸರ್ವೋತ್ತಮ ಪ್ರಶಸ್ತಿಯಾಗಿ ಅತ್ಯುತ್ತಮ ಅಕಾರಿಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತಿದೆ. ಈ ಪ್ರಶಸ್ತಿಗೆ ದ.ಕ. ಜಿಲ್ಲೆಯಿಂದ ಪ್ರಥಮ ಬಾರಿಗೆ ಆಯ್ಕೆ ನಡೆದಿದ್ದು, ಜಿಲ್ಲಾಡಳಿತದ ಶಿಾರಸಿನ ಮೇರೆಗೆ ಈ ಆಯ್ಕೆ ನಡೆದಿದೆ ಎಂದು ಅವರು ಹೇಳಿದರು.

ಇದೇ ವೇಳೆ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ನೀಡಲಾಗುವ ದ.ಕ. ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾದಿಕಾರಿ ತಿಳಿಸಿದರು.

ಅರಣ್ಯ ಇಲಾಖೆ ವಲಯ ಅರಣ್ಯಾಕಾರಿ ಪಿ. ಶ್ರೀಧರ, ಪೊಲೀಸ್ ಇಲಾಖೆ ಶಾಖಾೀಕ್ಷಕ ರವಿಚಂದ್ರ ಎ., ಕಂದಾಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ. ಹೈದರ್ ಅಲಿ ಮತ್ತು ಪ್ರಭಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಮಂಜುಳಾ, ತೋಟಗಾರಿಕಾ ಇಲಾಖೆಯ ಅಟೆಂಡರ್ ರಮೇಶ್‌ರವರು ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆಯಾದವರು. ಜ. 26ರಂದು ನೆಹರೂ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News