×
Ad

ಆಯುರ್‌ಜ್ಯೋತಿ ರಥಯಾತ್ರ ಸುಳ್ಯಕ್ಕೆ ಆಗಮನ

Update: 2016-01-25 16:55 IST

ಸುಳ್ಯ: ವಿಶ್ವ ಆರೋಗ್ಯ ಸಮ್ಮೇಳನದ ಅಂಗವಾಗಿ ಆಯುರ್‌ಜ್ಯೋತಿ ರಥ ಯಾತ್ರೆ ಸುಳ್ಯಕ್ಕೆ ಆಗಮಿಸಿದ್ದು, ಶಾಸ್ತ್ರಿ ವೃತ್ತದ ಬಳಿ ಅದ್ದೂರಿ ಸ್ವಾಗತ ನೀಡಲಾಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನಿನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಆಯುರ್‌ಜ್ಯೋತಿ ರಥವನ್ನು ಸ್ವಾಗತಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಕರ್ನಾಟಕ ಆಯುರ್ವೇದ-ಯುನಾನಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಸತ್ಯಮೂರ್ತಿ ಭಟ್ ಸದಸ್ಯ ಡಾ.ಅಪ್ರಮೇಯ ರಮಣ, ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಕೆವಿಜಿ ಆಯುವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಶೆಟ್ಟರ್, ಆಡಳಿತಾಧಿಕಾರಿ ಡಾ.ಲೀಲಾಧರ್, ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಎಂ.ಬಿ.ಸದಾಶಿವ, ರಾಜೀವ್‌ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯ ಡಾ.ರಘು, ಎಸ್‌ಐ ಚಂದ್ರಶೇಖರ್ ಮೊದಲಾದವರಿದ್ದರು. ರಥಕ್ಕೆ ಪೂರ್ಣಕುಂಭ ಸ್ವಾಗತದೊಂದಿಗೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ನಾಸಿಕ್ ಬ್ಯಾಂಡ್, ಚೆಂಡೆ ವಾದನ, ಯಕ್ಷಗಾನ ವೇಷಗಳ ಮೆರವಣಿಗೆಯ ಅಂದವನ್ನು ಹೆಚ್ಚಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News