ಮಂಗಳೂರು : ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಬಾಲಕೃಷ್ಣ ಶೆಟ್ಟಿ ನೇಮಕ
Update: 2016-01-25 22:24 IST
ಮಂಗಳೂರು,ಜ.25: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಬಾಲಕೃಷ್ಣ ಶೆಟ್ಟಿಯವರನ್ನು ನೇಮಕ ಮಾಡಲಾಗಿದೆ.
ಕೆಪಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಬಾಲಕೃಷ್ಣ ಶೆಟ್ಟಿಯವರನ್ನು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.