ಸಮಾಜದ ಕಷ್ಟಗಳನ್ನು ಮಕ್ಕಳಿಗೆ ಪರಿಚಯಿಸಿ: ಡಾ.ಅಶ್ವತ್‌ಕುವಾರ್
ಉಡುಪಿ, ಜ.25: ಸ್ಪರ್ಧೆಯಿಂದ ಮಕ್ಕಳಲ್ಲಿ ಕೇವಲ ಪೈಪೋಟಿ ಬೆಳೆಯುತ್ತದೆ ಹೊರತು ಬದುಕು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದುದರಿಂದ ಸಮಾಜದ ಕಷ್ಟಗಳನ್ನು ಮಕ್ಕಳಿಗೆ ಪರಿಚಯಿಸಿಕೊಡುವ ಕಾರ್ಯ
ಆಗಬೇಕು. ಆಗ ಮಾತ್ರ ಅವರು ಬದುಕನ್ನು ಅರ್ಥ ಮಾಡಿಕೊಳ್ಳಬಹುದಾದೆ ಎಂದು ಹೊಸಪೇಟೆಯ ಡಾ.ಜೆ.ಎಸ್.ಅಶ್ವತ್‌ಕುವಾರ್ ಮುನಿರಾಬಾದ್ ಹೇಳಿದ್ದಾರೆ.
ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಮಕ್ಕಳ ವಾರ್ಗದರ್ಶನ ಕೇಂದ್ರ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇವುಗಳ ಜಂಟಿ ಆಶ್ರಯದಲ್ಲಿ ದಿ.ಪ್ರೊ. ಪಿ.ವಿ.ಭಂಡಾರಿಯವರ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ಆಸ್ಪತ್ರೆಯ ಕಮಲ್ ಎ. ಬಾಳಿಗಾ ಹಾಲ್‌ನಲ್ಲಿ ಆಯೋಜಿಸಲಾದ ‘ಮಕ್ಕಳಹಬ್ಬ’ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಮೀನಾಕ್ಷಿ ಭಂಡಾರಿ ಉದ್ಘಾಟಿಸಿದರು. ಮುಖ್ಯ ಅತಿಥಿ ಮಾ.ಅರ್ಚಿತ್ ‘ಮಕ್ಕಳು-ಪರಿಸರ ಪ್ರಜ್ಞೆ’ಕುರಿತು ಮಾತನಾಡಿದರು. ಸಂಸ್ಥೆಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮನೋತಜ್ಞ ಡಾ.ವಿರೂಪಾಕ್ಷ ದೇವರಮನೆ ಉಪಸ್ಥಿತರಿದ್ದರು.
ಸೌಜನ್ಯಾ ಶೆಟ್ಟಿ ಸ್ವಾಗತಿಸಿದರು. ಪ್ರಭಾ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ದೀಪಕ್ ಮಲ್ಯ ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.