ಉಡುಪಿ : ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ
ಉಡುಪಿ, ಜ.26: ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಉಡುಪಿ ಹಾಗೂ ಕುಂದಾಪುರ ಘಟಕದ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಇಂದು ಉಡುಪಿಯ ಮಲಬಾರ್ ಗೋಲ್ಡ್‌ನಲ್ಲಿ ಆಯೋಜಿಸ ಲಾಗಿತ್ತು.
ಶಿಬಿರವನ್ನು ನಗರಸಭೆ ಸದಸ್ಯ ಶ್ಯಾಮ್ ಪ್ರಸಾದ್ ಕುಡ್ವ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಐಕಳ ಬಾವ ಚಿತ್ತರಂಜನ್‌ದಾಸ್ ಶೆಟ್ಟಿ, ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಕುಂದಾಪುರ ರೆಡ್‌ಕ್ರಾಸ್‌ನ ಜಯಕರ ಶೆಟ್ಟಿ, ಲಯನ್ಸ್ ಉಡುಪಿ ಮಿಡ್‌ಟೌನ್‌ನ ಅಧ್ಯಕ್ಷ ಉದಯ ಕುಮಾರ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸುರೇಶ್ ಶೆಟ್ಟಿ ಕಾಪು ಹಾಗೂ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸನ್ಮಾನಿಸಲಾಯಿತು. ಮಲಬಾರ್ ಚಾರಿ ಟೇಬಲ್ ಟ್ರಸ್ಟ್ ಈವರೆಗೆ ಒಟ್ಟು 57ಕೋಟಿ ರೂ.ಗಳನ್ನು 5,80,000 ಲಾ ನುಭವಿಗಳಿಗೆ ವಿತರಿಸಿದೆ. ಜ.31ರಂದು ಶಿರ್ವ ಸಮುದಾಯ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಮಳಿಗೆಯ ಮುಖ್ಯಸ್ಥ ಹಫೀಝ್ ತಿಳಿಸಿದ್ದಾರೆ. ಪ್ರಭಾಕರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.